ADVERTISEMENT

ಹುಣಸೂರು ನಗರಸಭೆ: ಕಾಂಗ್ರೆಸ್‌ಗೆ ಮುಖಭಂಗ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 19:56 IST
Last Updated 18 ಜನವರಿ 2018, 19:56 IST

ಮೈಸೂರು: ಹುಣಸೂರು ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಗುರುವಾರ ಕಾಂಗ್ರೆಸ್ ಮುಖಭಂಗಕ್ಕೆ ಒಳಗಾಗಿದೆ.

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಕುಮಾರ್ ಅವರು ಕೆಲವು ಕಾಂಗ್ರೆಸ್ ಸದಸ್ಯರು, ಜೆಡಿಎಸ್, ಪಕ್ಷೇತರರು ಹಾಗೂ ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣೆಯಲ್ಲಿ ಕಾಂಗ್ರೆಸ್‌ನ 6 ಸದಸ್ಯರು, ಜೆಡಿಎಸ್‌ನ 5, ಇಬ್ಬರು ಪಕ್ಷೇತರರು ಹಾಗೂ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಒಟ್ಟು 15 ಮಂದಿ ಶಿವಕುಮಾರ್‌ ಪರ ಮತ ಚಲಾಯಿಸಿದರು. ಕಾಂಗ್ರೆಸ್ ಬಹುಮತ ಹೊಂದಿದ್ದು, ಕ್ಷೇತ್ರದಲ್ಲಿ ಶಾಸಕರು ಇದ್ದರೂ ಅಧಿಕಾರ ಕಳೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.