ADVERTISEMENT

ವಿಧಾನಪರಿಷತ್‌ ಸದಸ್ಯರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2018, 19:30 IST
Last Updated 23 ಜನವರಿ 2018, 19:30 IST

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಸದಸ್ಯರು ಗ್ರಾಮ ಪಂಚಾಯ್ತಿಗಳ ಸಬಲೀಕರಣಕ್ಕೆ ಒತ್ತಾಯಿಸಿ ವಿಧಾನ
ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಮಂಗಳವಾರ ಧರಣಿ ನಡೆಸಿದರು.

ಗ್ರಾಮ ಸ್ವರಾಜ್‌ ಕಾಯ್ದೆಯಲ್ಲಿ ಪ್ರಸ್ತಾವಿಸಿದಂತೆ ಕಾರ್ಯಕ್ರಮ, ಅನುದಾನ, ಮಾನವ ಸಂಪನ್ಮೂಲವನ್ನು ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪಟ್ಟಣ ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದರು.

‘ಕಾಯ್ದೆ ಜಾರಿಗೆ ಬಂದರೂ ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ಕಾರ್ಯನಿರ್ವಾಹಕ ಅಧಿಕಾರ ಸಿಕ್ಕಿಲ್ಲ. ಅಧ್ಯಕ್ಷರುಗಳಿಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನೇರವಾಗಿ ವರದಿ ನೀಡುವುದಿಲ್ಲ. ಹೀಗಾಗಿ ಕೇರಳ ಮಾದರಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರುಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು. ಅಧ್ಯಕ್ಷರ ಆದೇಶ
ದಂತೆ ಪಿಡಿಒಗಳು ಕೆಲಸ ಮಾಡ
ಬೇಕು. ಅವರ ಸೇವಾ ವರದಿಯನ್ನು ಅಧ್ಯಕ್ಷರು ಬರೆಯುವಂತೆ ಕಾನೂನು ರೂಪಿಸಬೇಕು’ ಎಂದು ಕಾಂಗ್ರೆಸ್ಸಿನ ಕೆ.ಸಿ. ಕೊಂಡಯ್ಯ ಆಗ್ರಹಿಸಿದರು.

ADVERTISEMENT

‘ಸ್ಥಳೀಯ ಸಂಸ್ಥೆಗಳ ಸಬಲೀಕರಣ ಆಗದಿದ್ದರೆ ಕಾರ್ಯಕ್ರಮಗಳ ಅನುಷ್ಠಾನ ಕಷ್ಟ. ಈ ಉದ್ದೇಶದಿಂದ ಸರ್ಕಾರಕ್ಕೆ 33 ಬೇಡಿಕೆಗಳ ಪಟ್ಟಿಯನ್ನು ನೀಡಿದ್ದೇವೆ’ ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.