ADVERTISEMENT

ಮೈಸೂರು: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗೆ ಮೇಯರ್‌ ಪಟ್ಟ

​ಪ್ರಜಾವಾಣಿ ವಾರ್ತೆ
Published 24 ಜನವರಿ 2018, 19:30 IST
Last Updated 24 ಜನವರಿ 2018, 19:30 IST
ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಏಕಾಂಗಿಯಾಗಿ ಅಳುತ್ತಾ ಕುಳಿತಿದ್ದರು. ಕಾಂಗ್ರೆಸ್ ಸದಸ್ಯರು ಸಭೆ ಬಹಿಷ್ಕರಿಸಿದ ನಂತರ ಒಬ್ಬಂಟಿಯಾಗಿದ್ದರು.
ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಏಕಾಂಗಿಯಾಗಿ ಅಳುತ್ತಾ ಕುಳಿತಿದ್ದರು. ಕಾಂಗ್ರೆಸ್ ಸದಸ್ಯರು ಸಭೆ ಬಹಿಷ್ಕರಿಸಿದ ನಂತರ ಒಬ್ಬಂಟಿಯಾಗಿದ್ದರು.   

ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಬುಧವಾರ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಎಸ್.ಭಾಗ್ಯವತಿ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಇಂದಿರಾ ಮಹೇಶ್ ಉಪಮೇಯರ್‌ ಆಗಿ ಅವಿರೋಧವಾಗಿ ಆಯ್ಕೆಯಾದರು.

ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತವಿಲ್ಲ. ಜೆಡಿಎಸ್–ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಮೊದಲ ನಾಲ್ಕು ವರ್ಷ ಅಧಿಕಾರ ನಡೆಸಿತ್ತು. ಮೀಸಲಾತಿಯ ಬಲದಿಂದ ಕೊನೆಯ ಅವಧಿಯ ಆಡಳಿತವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆಯುವ ಲೆಕ್ಕಾಚಾರ ಹಾಕಿಕೊಂಡಿತ್ತು. ಈ ತಂತ್ರಕ್ಕೆ ಪ್ರತಿತಂತ್ರ ರೂಪಿಸಿದ ಜೆಡಿಎಸ್‌ ಮತ್ತು ಬಿಜೆಪಿ ಮೇಯರ್‌ ಪಟ್ಟ ಕಾಂಗ್ರೆಸ್‌ಗೆ ಸಿಗದಂತೆ ನೋಡಿಕೊಂಡಿದೆ.

ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಭಾಗ್ಯವತಿ ಏಕಾಂಗಿಯಾಗಿ ಅಳುತ್ತಾ ಕುಳಿತಿದ್ದರು. ಕಾಂಗ್ರೆಸ್ ಸದಸ್ಯರು ಸಭೆ ಬಹಿಷ್ಕರಿಸಿದ್ದರಿಂದ ಆಸನಗಳು ಖಾಲಿ ಉಳಿದಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.