ADVERTISEMENT

ಮಂಗಳೂರಿನಲ್ಲಿ ಕರವೇ ಕಾರ್ಯಕರ್ತರಿಂದ ರೈಲು ತಡೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2018, 8:07 IST
Last Updated 25 ಜನವರಿ 2018, 8:07 IST
ಮಂಗಳೂರಿನಲ್ಲಿ ಕರವೇ ಕಾರ್ಯಕರ್ತರಿಂದ ರೈಲು ತಡೆಗೆ ಯತ್ನ
ಮಂಗಳೂರಿನಲ್ಲಿ ಕರವೇ ಕಾರ್ಯಕರ್ತರಿಂದ ರೈಲು ತಡೆಗೆ ಯತ್ನ   

ಮಂಗಳೂರು: ಮಹದಾಯಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ತಡೆಗೆ ಯತ್ನಿಸಿದರು.

ರೈಲು ಹಳಿಯ ಮೇಲೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಆರ್ ಪಿಎಫ್ ಸಿಬ್ಬಂದಿ ತೆರವುಗೊಳಿಸಿದರು.

ಮಾತಿನ ಚಕಮಕಿ: ಪ್ರತಿಭಟನೆ ಮುಗಿಸಿ‌ ರೈಲು ನಿಲ್ದಾಣದಿಂದ ಹೊರಬರುತ್ತಿದ್ದಂತೆಯೆ ಕರವೇ ಕಾರ್ಯಕರ್ತರು ಹಾಗೂ ತುಳನಾಡು ರಕ್ಷಣಾ ವೇದಿಕೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ADVERTISEMENT

ತುಳುಭಾಷೆಗೆ ಅವಮಾನ ಮಾಡಿದ ಕರವೇ ಕಾರ್ಯಕರ್ತ ಜಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲದೇ ನೇತ್ರಾವತಿ ಉಳಿಸಿ ಹೋರಾಟಕ್ಕೆ ಬೆಂಬಲ ನೀಡದಿರುವುದಕ್ಕೂ ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಸಂಚಾರ‌ ಸ್ಥಗಿತ: ಕೆಎಸ್ಆರ್‌ಟಿಸಿ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಆದರೆ, ಅಟೋ ರಿಕ್ಷಾ, ಖಾಸಗಿ ಬಸ್ ಗಳ ಓಡಾಟ ಸಾಮಾನ್ಯವಾಗಿತ್ತು.
ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.