ADVERTISEMENT

ದೇವಸ್ಥಾನ ಶಾಲೆಗಳ ಸಮಸ್ಯೆ: ಫೆ. 5 ರಂದು ಸಭೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 19:34 IST
Last Updated 26 ಜನವರಿ 2018, 19:34 IST

ರಾಯಚೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನದಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಸಮಸ್ಯೆಯನ್ನು ಪರಿಹರಿಸಲು ಫೆಬ್ರುವರಿ 5ರಂದು ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಯಚೂರಿನ ದೇವಸುಗೂರು ಟ್ರಸ್ಟ್‌ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ 34 ಶಿಕ್ಷಕರ ಸಮಸ್ಯೆ ಗಮನಕ್ಕೆ ಬಂದಿದೆ. ಇದೇ ರೀತಿಯ ಸಮಸ್ಯೆ ರಾಜ್ಯದ ಬೇರೆ ಕಡೆಗಳಲ್ಲೂ ಇದೆ. ಹೀಗಾಗಿ ಮುಜರಾಯಿ ಇಲಾಖೆಯ ಆಯುಕ್ತರು ಮತ್ತು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದು ಹೇಳಿದರು.

’ರಾಯಚೂರಿನಲ್ಲಿ ಐಐಐಟಿ ಸ್ಥಾಪಿಸಲು ಕೇಂದ್ರವು ಅನುಮೋದನೆ ನೀಡಿರುವುದು ಸ್ವಾಗತಾರ್ಹ. ಈಗಾಗಲೇ ಅಗತ್ಯ ಭೂಮಿ ಗುರುತಿಸುವ ಕೆಲಸ ಆರಂಭಿಸಲಾಗಿದೆ. ಎಐಎಂಎಸ್‌ (ಆಲ್‌ ಇಂಡಿಯಾ ಮೆಡಿಕಲ್‌ ಸೈನ್ಸ್‌) ಆಸ್ಪತ್ರೆಯನ್ನು ರಾಯಚೂರಿನಲ್ಲೇ ಆರಂಭಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿತ್ತು. ಆದರೆ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.