ADVERTISEMENT

ತಾ.ಪಂ. ಬಿಜೆಪಿ ಸದಸ್ಯ ಸಂಜು ಕೋರ್ಟ್‌ಗೆ ಶರಣು

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 19:30 IST
Last Updated 27 ಜನವರಿ 2018, 19:30 IST
ಸಂಜು ಎಂಟಮಾನ
ಸಂಜು ಎಂಟಮಾನ   

ವಿಜಯಪುರ: ಅಕ್ರಮ ಶಸ್ತ್ರಾಸ್ತ್ರ, ಶೂಟೌಟ್ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಸಿಂದಗಿ ತಾಲ್ಲೂಕು ಪಂಚಾಯ್ತಿ ಬಿಜೆಪಿ ಸದಸ್ಯ ಸಂಜು ಎಂಟಮಾನ ಶನಿವಾರ ಸಿಂದಗಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಭೀಮಾ ತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನ ಮೇಲೆ ವಿಜಯಪುರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಗಸ್ಟ್‌ 8ರಂದು ನಡೆದ ಶೂಟೌಟ್‌ ಪ್ರಕರಣದಲ್ಲಿ ಇವರು 8ನೇ ಆರೋಪಿಯಾಗಿದ್ದಾರೆ.

ಆಲಮೇಲ ಪೊಲೀಸ್‌ ಠಾಣೆಯಲ್ಲಿ ಇವರ ವಿರುದ್ಧ 2010ರಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣ ಇದೆ. ಇದಕ್ಕೆ ಸಂಬಂಧಿಸಿ ಸಿಂದಗಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು. ಆರೋಪಿಯನ್ನು ಜಿಲ್ಲಾ ಜೈಲಿಗೆ ಕಳುಹಿಸಲಾಗಿದೆ. ಉತ್ತರ ವಲಯ ಐಜಿಪಿ ಅಲೋಕ್‌ಕುಮಾರ್‌ ಅವರು ಇತ್ತೀಚೆಗೆ ಆಲಮೇಲ ಠಾಣೆಯಲ್ಲಿ ರೌಡಿಗಳ ಪರೇಡ್‌ ಮಾಡಿಸಿದ್ದರು. ಆ ಸಂದರ್ಭ ಸಂಜು ಸಹಚರರಿಗೆ ಖಡಕ್‌ ಎಚ್ಚರಿಕೆ ನೀಡಿದ್ದರು. ಇದಕ್ಕೆ ಹೆದರಿ ಸಂಜು ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.