ADVERTISEMENT

ಮಾಜಿ ಸಚಿವ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2018, 6:31 IST
Last Updated 31 ಜನವರಿ 2018, 6:31 IST
ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್‌ ಸಿಂಗ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್‌ ಸಿಂಗ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು.   

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ಅವರು ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಅಧ್ಯಕ್ಷರಾದ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಆನಂದ್‌ ಸಿಂಗ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್. ಆರ್.  ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.