ADVERTISEMENT

ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಐ.ಟಿ ಶೋಧ

ಕಾಂಗ್ರೆಸ್‌ನ ನಾಯಕರೊಬ್ಬರ ಪಾಲುದಾರಿಕೆ ಕಂಪನಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2018, 19:30 IST
Last Updated 1 ಫೆಬ್ರುವರಿ 2018, 19:30 IST

ಬೆಂಗಳೂರು: ಕಾಂಗ್ರೆಸ್‌ ಪ್ರಭಾವಿ ನಾಯಕರೊಬ್ಬರು ಪಾಲುದಾರಿಕೆ ಹೊಂದಿದ್ದಾರೆ ಎನ್ನಲಾದ ರಿಯಲ್ ಎಸ್ಟೇಟ್ ಕಂಪನಿಯೊಂದರ ಕಚೇರಿಗಳಲ್ಲಿ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಗುರುವಾರ ಶೋಧ ನಡೆಸಿದ್ದಾರೆ.

ಇಲ್ಲಿಯ ಶಾಂತಿನಗರದ ಕಚೇರಿ ಸೇರಿ 13 ಕಡೆ ಶೋಧ ನಡೆಸಲಾಗುತ್ತಿದ್ದು, ಇದೇ ಕಂಪನಿಯ ಹೈದಾರಾಬಾದ್ ಶಾಖಾ ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಐ.ಟಿ ಮೂಲಗಳು ತಿಳಿಸಿವೆ.

ಈ ಕಂಪನಿ ಬಂಡವಾಳ ಹೂಡಿದೆ ಎನ್ನಲಾದ ‌ಖಾಸಗಿ ಸುದ್ದಿ ವಾಹಿನಿಯೊಂದರ ಆಡಳಿತ ಕಚೇರಿಯ ಅಕೌಂಟ್ ಶಾಖೆಯಲ್ಲೂ ಶೋಧ ನಡೆಸಲಾಗಿದೆ. ಆದಾಯ ಮೀರಿ ಆಸ್ತಿ ಸಂಪಾದನೆ ಮತ್ತು ತೆರಿಗೆ ವಂಚನೆಗೆ ಸಂಬಂಧಿಸಿದ ಮಾಹಿತಿ ಆಧರಿಸಿ ಶೋಧ  ನಡೆಸಲಾಗಿದೆ ಎಂದೂ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.