ADVERTISEMENT

ಕೋಮುಗಲಭೆಗೆ ಹುನ್ನಾರ: ನೌಹೀರಾ ಶೇಖ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2018, 19:30 IST
Last Updated 1 ಫೆಬ್ರುವರಿ 2018, 19:30 IST
ಕೋಮುಗಲಭೆಗೆ ಹುನ್ನಾರ: ನೌಹೀರಾ ಶೇಖ್
ಕೋಮುಗಲಭೆಗೆ ಹುನ್ನಾರ: ನೌಹೀರಾ ಶೇಖ್   

ಮೈಸೂರು: ಭಾರತ ಒಂದು ಶಾಂತಿ ರಾಷ್ಟ್ರ. ಆದರೆ, ಹಿಂದೂ ಹಾಗೂ ಮುಸ್ಲಿಮರ ಮಧ್ಯೆ ಜಗಳ ಹೊತ್ತಿಸಲು ಕೆಲವರು ಹವಣಿಸುತ್ತಿದ್ದಾರೆ. ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ನಿರತವಾಗಿವೆ. ಜನರು ಮುಂಬರುವ ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಬಲೀಕರಣ ಪಕ್ಷದ ಅಧ್ಯಕ್ಷೆ ಡಾ.ನೌಹೀರಾ ಶೇಖ್‌ ಆತಂಕ ವ್ಯಕ್ತಪಡಿಸಿದರು.

ಗುರುವಾರ ಇಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಅವರು ಮಾತನಾಡಿದರು.

ತಮ್ಮ ಪಕ್ಷವು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಲಿದೆ. ಎಲ್ಲ ಪಕ್ಷದವರಿಗೂ ಜನರು ಅವಕಾಶ ಕೊಟ್ಟಿದ್ದಾರೆ. ಅವರ ಕಾರ್ಯವೈಖರಿ ಕಂಡು ಜನರು ರೋಸಿ ಹೋಗಿದ್ದಾರೆ. ಪಕ್ಷವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದಂತೂ ಖಚಿತ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.