ಹೊಸಪೇಟೆ: ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಆನಂದ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪವಿದೆ ಹೊರತು ಅದು ಸಾಬೀತಾಗಿಲ್ಲ. ಹೀಗಾಗಿ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದು ಎಂದು ಸಚಿವ ಸಂತೋಷ ಲಾಡ್ ಶುಕ್ರವಾರ ಇಲ್ಲಿ ಅಭಿಪ್ರಾಯಪಟ್ಟರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಆನಂದ್ ಸಿಂಗ್ ಪಕ್ಷ ಸೇರಿದ್ದಾರೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಕೂಡ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಆದರೆ, ಇವರಿಬ್ಬರಿಗೂ ಟಿಕೆಟ್ ಖಚಿತವಾಗಿಲ್ಲ. ಟಿಕೆಟ್ ಸಿಗುವ ಭರವಸೆ ಸಿಕ್ಕಿದೆ ಎಂದು ಅವರು ಹೇಳಿಕೊಂಡರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಕೂಡ ಪಕ್ಷ ಸೇರುವ ಸಾಧ್ಯತೆ ಇದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.