ADVERTISEMENT

‘ನೀರು ಬಿಡಲು ಒಪ್ಪಿದರೆ, ಗೋವಾ ಕಾಂಗ್ರೆಸ್‌ ಜತೆ ಮಾತುಕತೆ’

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST

ಹುಬ್ಬಳ್ಳಿ: ‘ರಾಜ್ಯಕ್ಕೆ ಮಹದಾಯಿ ನೀರನ್ನು ನೀಡುವುದಾಗಿ ಗೋವಾ ಸರ್ಕಾರ ಆದೇಶ ಹೊರಡಿಸಿದರೆ, ಅಲ್ಲಿನ ಕಾಂಗ್ರೆಸ್‌ ಮುಖಂಡರೊಂದಿಗೆ ನಾವೂ ಮಾತನಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌ ಶನಿವಾರ ಇಲ್ಲಿ ಹೇಳಿದರು.

ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಈ ವಿಷಯವಾಗಿ ಹೈಕಮಾಂಡ್‌ ಜತೆಗೂ ಮಾತನಾಡುವುದಾಗಿ ತಿಳಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿಗೆ 16 ಬಾರಿ ಪತ್ರ ಬರೆದಿದ್ದಾರೆ. ಒಂದಕ್ಕೂ ಉತ್ತರಿಸಿಲ್ಲ. ಆದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಲವ್‌ ಲೆಟರ್‌ ಬರೆದಿದ್ದಾರೆ’ ಎಂದು ವ್ಯಂಗ್ಯವಾಡಿದರು.

ADVERTISEMENT

‘ಸ್ವಾಮೀಜಿಗಳಾದವರು ಅರಿಷಡ್ವರ್ಗಗಳನ್ನು ಬಿಡುತ್ತಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗುವುದಕ್ಕಾಗಿ ಯೋಗಿ ಆದಿತ್ಯನಾಥ ಅವರು ಧರ್ಮವನ್ನೇ ಬಿಟ್ಟಿದ್ದಾರೆ’ ಎಂದು ಟೀಕಿಸಿದ ಅವರು, ‘ಟಿಪ್ಪು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್‌ ಯೋಧ. ಅವರನ್ನು ಟೀಕಿಸುವ ಆದಿತ್ಯನಾಥ ಅವರಿಗೆ ಸ್ವಾತಂತ್ರ್ಯ ಇತಿಹಾಸ ಗೊತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.