ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 8:02 IST
Last Updated 4 ಫೆಬ್ರುವರಿ 2018, 8:02 IST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ   

ರಾಮನಗರ: ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಗೆ ತೆರಳುವ ಸಲುವಾಗಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿದಿವೆ. ಇದರಿಂದ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೆಳಿಗ್ಗೆಯಿಂದಲೇ ಸಂಚಾರ ದಟ್ಟಣೆ ಸಮಸ್ಯೆಯಾಗಿದೆ.

ರಾಮನಗರದಲ್ಲಿ ಆಗಾಗ್ಗೆ ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲಾಗಿ ನಿಲ್ಲುತ್ತಿವೆ.

ಉಪಾಹಾರ ವ್ಯವಸ್ಥೆ: ಮಂಗಳೂರು, ಮಡಿಕೇರಿ, ಮೈಸೂರು ಹಾಗೂ ಸುತ್ತಲಿನ ಜಿಲ್ಲೆಗಳಿಂದ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಸಾವಿರಾರು ಕಾರ್ಯಕರ್ತರಿಗೆ ಇಲ್ಲಿನ ಜಾನಪದ‌ ಲೋಕದ ಬಳಿ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಟೊಮ್ಯಾಟೊ ಬಾತ್, ಕೇಸರಿ ಬಾತ್ ಬಡಿಸಲಾಯಿತು.

ADVERTISEMENT

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.