
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿರುವ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಹೋಗುತ್ತಿದ್ದ 50 ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೋರಾಟಗಾರರು ಸ್ವಾತಂತ್ರ್ಯ ಉದ್ಯಾನದಿಂದ ಅರಮನೆ ಮೈದಾನದತ್ತ ಮೆರವಣಿಗೆ ಮೂಲಕ ಹೊರಟಿದ್ದರು. ವಶಕ್ಕೆ ಪಡೆದ ಹೋರಾಟಗಾರರನ್ನು ಸದ್ಯ ಆಡುಗೋಡಿ ಕೆಎಸ್ಆರ್‌ಪಿ ಮೈದಾನಕ್ಕೆ ಕರೆದೊಯ್ಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.