ADVERTISEMENT

ಅಪರಾಧಿಗೆ 10 ವರ್ಷ ಕಠಿಣ ಜೈಲು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2018, 19:30 IST
Last Updated 5 ಫೆಬ್ರುವರಿ 2018, 19:30 IST

ಮೈಸೂರು: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ದೊಡ್ಡ ಹೈದ (29) ಎಂಬಾತನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಎಚ್‌.ಡಿ.ಕೋಟೆ ತಾಲ್ಲೂಕಿನ ಹಾಡಿಯೊಂದರಲ್ಲಿ 2017ರ ಜ.30ರಂದು ಅತ್ಯಾಚಾರ ನಡೆದಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಂ.ಪಾವಲೆ ಈ ಆದೇಶ ನೀಡಿದ್ದಾರೆ.

‘ಸಂತ್ರಸ್ತೆಯ ತಾಯಿಯ ದೂರದ ಸಂಬಂಧಿಯಾಗಿರುವ ಆರೋಪಿ, ಆಟವಾಡಿಸುವ ನೆಪದಲ್ಲಿ ಬಾಲಕಿಯನ್ನು ಹಳ್ಳದ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಆಕೆ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದದನ್ನು ಗಮನಿಸಿದ ಮಹಿಳೆಯೊಬ್ಬರು ಸಮೀಪಕ್ಕೆ ತೆರಳಿ ಪರಿಶೀಲಿಸಿದಾಗ ಕೃತ್ಯ ಗೊತ್ತಾಗಿತ್ತು. ಅತ್ಯಾಚಾರ ನಡೆದಿದ್ದನ್ನು ವೈದ್ಯಕೀಯ ವರದಿ ದೃಢಪಡಿಸಿತ್ತು’ ಎಂದು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಸಿ.ಶಿವರುದ್ರಸ್ವಾಮಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.