ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ವಿಚಾರಣೆಯು ಫೆಬ್ರವರಿ 8 ಕ್ಕೆ ಮುಂದೂಡಲ್ಪಟ್ಟಿದೆ.
ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮಂಡಳಿ ನಡೆಸಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಡೆಸಬೇಕು ಎಂದು ರಾಜ್ಯ ಸರ್ಕಾರ ಹೇಳಿತ್ತು. ಹಾಗಾಗಿ ಗೋವಾ ಪರ ವಕೀಲರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದ್ದಾರೆ.
ಫೆ.13ರೊಳಗೆ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಾಧ್ಯಸಾಧ್ಯತೆಗಳ ಬಗ್ಗೆ ತಿಳಿಸುವುದಾಗಿ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ಅವರು ಹೇಳಿದ್ದಾರೆ. ಆದಕಾರಣ ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.