ADVERTISEMENT

ಕೆಪಿಸಿಎಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST

ಬೆಂಗಳೂರು: ಕೆಪಿಸಿಎಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚು ಸಿಬ್ಬಂದಿ ಇದ್ದಾರೆ. ಇವರ ಸಂಬಳಕ್ಕಾಗಿ ವರ್ಷಕ್ಕೆ 1,000 ಕೋಟಿಗೂ ಅಧಿಕ ವೆಚ್ಚವಾಗುತ್ತಿದೆ. ಖಾಸಗಿ ಕಂಪನಿಗಳಿಗೆ ಹೋಲಿಸಿದರೆ ಇದು ತೀರಾ ಹೆಚ್ಚು ಎಂದು ಇಂಧನ ಸಚಿವರು ತಿಳಿಸಿದರು.

ಜಿಂದಾಲ್‌ ಕಂಪನಿಯು ತಲಾ 3 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಲು ಒಬ್ಬ ಸಿಬ್ಬಂದಿಯನ್ನು ಹೊಂದಿದೆ. ಯುಪಿಸಿಎಲ್‌ನಲ್ಲಿ ತಲಾ 4 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಲು ಒಬ್ಬ ಸಿಬ್ಬಂದಿ ಇದ್ದಾರೆ. ಕೆಪಿಸಿಎಲ್‌ನಲ್ಲಿ 1 ಮೆಗಾವಾಟ್‌ ವಿದ್ಯುತ್‌ ಉತ್ಪಾದನೆಗೆ 1.8ರಷ್ಟು ಸಿಬ್ಬಂದಿ ಇದ್ದಾರೆ ಎಂದು ಅವರು ವಿವರಿಸಿದರು.

‘ಆರ್‌ಟಿಪಿಎಸ್‌ ಹಾಗೂ ವೈಟಿಪಿಎಸ್‌ಗೆ ಜಾಗ ಬಿಟ್ಟುಕೊಟ್ಟ 259 ಕುಟುಂಬಗಳ ಸದಸ್ಯರಿಗೆ ಉದ್ಯೋಗದ ಭರವಸೆ ನೀಡಲಾಗಿತ್ತು.  ಈವರೆಗೆ 109 ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಉದ್ಯೋಗ ನೀಡಿದ್ದೇವೆ. ಇನ್ನುಳಿದವರಿಗೂ ಉದ್ಯೋಗ ನೀಡಲು ಬದ್ಧ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.