ADVERTISEMENT

2ಎಗೆ ಸೇರಿಸಲು ಬಲಿಜರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2018, 19:30 IST
Last Updated 10 ಫೆಬ್ರುವರಿ 2018, 19:30 IST
ಬೆಂಗಳೂರಿನಲ್ಲಿ ಶನಿವಾರ ಬಲಿಜ ಸಮುದಾಯದವರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಬಲಿಜ ಸಮುದಾಯದವರು – ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಶನಿವಾರ ಬಲಿಜ ಸಮುದಾಯದವರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಬಲಿಜ ಸಮುದಾಯದವರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಪಡೆಯಲು ಬಲಿಜ ಸಮುದಾಯವನ್ನು ಪ್ರವರ್ಗ–2(ಎ)ಗೆ ಸೇರಿಸಬೇಕು ಎಂದು ಒತ್ತಾಯಿಸಿ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ‘ರಾಜ್ಯ ಬಲಿಜ ಯುವಶಕ್ತಿ ಸಂಘಟನೆ’ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಯಿತು.

ಗೃಹ ಸಚಿವ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ‘ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.