ADVERTISEMENT

ಜೆಡಿಎಸ್– ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 7:29 IST
Last Updated 19 ಫೆಬ್ರುವರಿ 2018, 7:29 IST

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಕಾಂಕ್ರೀಟ್‌ ರಸ್ತೆಯ ಭೂಮಿಪೂಜೆ ನೆರವೇರಿಸುವುದಕ್ಕೆ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಭಾನುವಾರ ಘರ್ಷಣೆ ನಡೆದಿದೆ.

ಗೆಜ್ಜಗಳ್ಳಿಯಲ್ಲಿ ಭೂಮಿ ಪೂಜೆಗೆ ಯತೀಂದ್ರ ಬಂದಿದ್ದನ್ನು ಕಂಡು ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಟ್ಟು ಕಾಮಗಾರಿಗೆ ಚಾಲನೆ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ.

ಮಧ್ಯ ಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ADVERTISEMENT

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.