ADVERTISEMENT

ಪ್ರಧಾನಿ ಮೋದಿಗೆ ಮೈಸೂರಿನ ವಿಮಾನನಿಲ್ದಾಣದಲ್ಲಿ ಸಿಎಂ ಸ್ವಾಗತ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 4:55 IST
Last Updated 19 ಫೆಬ್ರುವರಿ 2018, 4:55 IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.   

ಬೆಂಗಳೂರು: ಮೈಸೂರಿನಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶ ಸೇರಿದಂತೆ ಸೋಮವಾರ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ ಅವರು ಮೈಸೂರಿನ ವಿಮಾನನಿಲ್ದಾಣದಲ್ಲಿ ಭಾನುವಾರ ರಾತ್ರಿ ಸ್ವಾಗತ ಕೋರಿದರು.

ಪ್ರಧಾನಿಗೆ ಗುಲಾಬಿ ಹೂವು ನೀಡಿ, ರೇಷ್ಮೆ ದಡಿಯ ಬಿಳಿಯಶಲ್ಯ ಹಾಕಿ, ಹಸ್ತ ಲಾಘವ ಮಾಡಿ ಸಿಎಂ ಸ್ವಾಗತಿಸಿದರು.

‘ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಾಯಿತು’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರೂ ಸಹ ಪ್ರಧಾನಿಗೆ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.