ಧಾರವಾಡ: ಶಿವಾಜಿ ಜಯಂತಿ ಅಂಗವಾಗಿ ಸೋಮವಾರ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕಾಂಗ್ರೆಸ್ ನಾಮ ನಿರ್ದೇಶಿತ ಪಾಲಿಕೆ ಸದಸ್ಯ ಮಂಜುನಾಥ ಕದಂ ಅವರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು.
ಇಲ್ಲಿನ ಶಿವಾಜಿ ವೃತ್ತದಲ್ಲಿರುವ ಪ್ರತಿಮೆಗೆ ಬೃಹತ್ ಮಾಲೆ ಅರ್ಪಿಸಿದ ನಂತರ ಹಿಂದೆ ಇದ್ದ ಸಹಾಯಕರೊಬ್ಬರು ಪಿಸ್ತೂಲು ನೀಡಿದರು. ಕದಂ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು. ಶಿವಾಜಿ ಮಹಾರಾಜ್ ಕಿ ಜೈ ಎಂಬ ಜಯಘೋಷ ಮೊಳಗಿತು.
ಶರಹರ ಠಾಣಾ ವ್ಯಾಪ್ತಿಯಲ್ಲಿ ಇದು ನಡೆದಿದ್ದು, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
</p></p>
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.