ADVERTISEMENT

ಬಾಲಕಿ ವಿವಸ್ತ್ರ ಮಾಡಿ ವಿಡಿಯೊ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 20:20 IST
Last Updated 19 ಫೆಬ್ರುವರಿ 2018, 20:20 IST

ಶನಿವಾರಸಂತೆ (ಮಡಿಕೇರಿ): ಸಮೀಪದ ಗ್ರಾಮವೊಂದರ ಬಾಲಕಿಯನ್ನು ವಿವಸ್ತ್ರಗೊಳಿಸಿದ ಮುಸ್ಲಿಂ ಸಮುದಾಯದ ಬಾಲಕನೊಬ್ಬ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದಾನೆ. ಅದನ್ನು ಖಂಡಿಸಿ ಗ್ರಾಮಸ್ಥರು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಇಲ್ಲಿನ ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಪಕ್ಕದ ಮನೆಯ 10ನೇ ತರಗತಿ ಓದುತ್ತಿರುವ ಬಾಲಕ ಚಿತ್ರೀಕರಣ ಮಾಡಿದ್ದಾನೆ. ಹಲವು ದಿನಗಳ ಹಿಂದೆಯೇ ಚಿತ್ರೀಕರಣ ಮಾಡಲಾಗಿತ್ತು. ಭಾನುವಾರ ರಾತ್ರಿ ವಿಷಯ ಬೆಳಕಿಗೆ ಬಂದಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದನ್ನು ಖಂಡಿಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಳಿಕ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.