ADVERTISEMENT

ಖರ್ಗೆಗೆ ‘ಜಯದೇವಶ್ರೀ’ ಪ್ರಶಸ್ತಿ

ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯ 61ನೇ ಸ್ಮರಣೋತ್ಸವ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST
ಖರ್ಗೆಗೆ ‘ಜಯದೇವಶ್ರೀ’ ಪ್ರಶಸ್ತಿ
ಖರ್ಗೆಗೆ ‘ಜಯದೇವಶ್ರೀ’ ಪ್ರಶಸ್ತಿ   

ದಾವಣಗೆರೆ: ಸಂಸತ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್‌ನಿಂದ ನೀಡುವ ‘ಜಯದೇವಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಬುಧವಾರ ಮಾಹಿತಿ ನೀಡಿದ ಅವರು, ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ‘ಶೂನ್ಯಪೀಠಅಲ್ಲಮ’ ಪ್ರಶಸ್ತಿ, ಬಿಜೆಪಿ ನಾಯಕಿ ಪ್ರಮೀಳಾ ನೇಸರ್ಗಿ ಅವರಿಗೆ ‘ಶೂನ್ಯಪೀಠ ಅಕ್ಕನಾಗಮ್ಮ’ ಪ್ರಶಸ್ತಿ ಹಾಗೂ ಸಮಾಜ ಸೇವಕ ಡಾ.ಸಿ.ಆರ್.ನಸೀರ್‌ ಅಹಮದ್‌ ಅವರಿಗೆ ‘ಶೂನ್ಯಪೀಠ ಚನ್ನಬಸವ’ ಪ್ರಶಸ್ತಿ ನೀಡಲಾಗುವುದು ಎಂದರು.

ಪ್ರಶಸ್ತಿಯು ತಲಾ ₹25 ಸಾವಿರ ನಗದು, ಫಲಕ, ಸ್ಮರಣಿಕೆ ಒಳಗೊಂಡಿದೆ. ದಾವಣಗೆರೆಯಲ್ಲಿ ಮಾರ್ಚ್ 3ರಂದು  ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.