ADVERTISEMENT

ಎರಡು ಖಾಸಗಿ ವಿ.ವಿ ಆರಂಭಕ್ಕೆ ವಿಧಾನಸಭೆ ಸಮ್ಮತಿ

ಎಸ್‌ಡಿಎಂ ಮತ್ತು ಖಾಜಾ ಬಂದಾನವಾಜ್‌ ವಿವಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ಬೆಂಗಳೂರು: ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ ಮತ್ತು ಕಲಬುರ್ಗಿಯ ಖಾಜಾ ಬಂದಾನವಾಜ್‌ ವಿಶ್ವವಿದ್ಯಾಲಯ ಮಸೂದೆಗಳಿಗೆ ವಿಧಾನಸಭೆ ಅನುಮೋದನೆ ನೀಡಿತು.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಮಸೂದೆಯನ್ನು ಮಂಡಿಸಿ, ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ನೀಡುತ್ತಿರುವುದಾಗಿ ಹೇಳಿದರು.

ಇವೆರಡೂ ಶಿಕ್ಷಣ ಸಂಸ್ಥೆಗಳು ಬಹಳ ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿವೆ. ಸ್ವತಂತ್ರ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಿರುವ ಸೂಕ್ತ ವ್ಯವಸ್ಥೆಯನ್ನೂ ಹೊಂದಿವೆ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.