ADVERTISEMENT

‘ಅಧಿಸೂಚನೆ ಹೊರಡಿಸಿ’

ಭಾಷಾ–ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 19:30 IST
Last Updated 22 ಫೆಬ್ರುವರಿ 2018, 19:30 IST

ಬೆಂಗಳೂರು: ‘ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ವರದಿಯಲ್ಲಿ ಗುರುತಿಸಲಾಗಿರುವ ರಾಜ್ಯದಲ್ಲಿರುವ ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಕುರಿತಂತೆ ಕೇಂದ್ರ ಸರ್ಕಾರ ಮೂರು ವಾರಗಳಲ್ಲಿ ಅಧಿಸೂಚನೆ ಹೊರಡಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠ ನಿರ್ದೇಶಿಸಿದೆ.

ಸಿಇಟಿ ಅನುಮತಿ: ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) 2018ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

ADVERTISEMENT

‘ಒಸಿಐ ಅಭ್ಯರ್ಥಿಗಳು ಸಲ್ಲಿಸುವ ಅರ್ಜಿಗಳು ಮುದ್ರಿತ ಅರ್ಜಿ ನಮೂನೆಯಲ್ಲಿಯೇ (ಹಾರ್ಡ್‌ಕಾಪಿ) ಇರಬೇಕು’ ಎಂದೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.