ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಬಾಲಕರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2021, 18:32 IST
Last Updated 26 ಡಿಸೆಂಬರ್ 2021, 18:32 IST
   

ಧಾರವಾಡ: ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

‘ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಲಾಯಿತು. ಬೇರೆ ಬೇರೆ ಸ್ಥಳಗಳಲ್ಲಿ ಮೂರು ತಿಂಗಳ ಕಾಲ ಈ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಇದಲ್ಲದೇ ಈ ಕೃತ್ಯವನ್ನು ಗೋಪ್ಯವಾಗಿಡಲು ಬಾಲಕಿಗೆ ಅವರು ಪ್ರಾಣ ಬೆದರಿಕೆ ಒಡ್ಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ
ಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.