ಬೆಂಗಳೂರು:ಟಾಟಾನಗರದಿಂದ 6 ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ ‘ಆಕ್ಸಿಜನ್ ಎಕ್ಸ್‌ಪ್ರೆಸ್’ ರೈಲು ಮಂಗಳವಾರ ಬೆಳಗ್ಗೆ ಬೆಂಗಳೂರು ತಲುಪಿದ್ದು ಕೇಂದ್ರ ನಾಯಕರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರಾದ ಪಿಯೂಷ್ ಗೋಯಲ್, ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಷಿ ಅವರಿಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ.
120 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್‌ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗೆ ಸಹಕರಿಸಿದ ಕೇಂದ್ರ ಸಚಿವರುಗಳು ಹಾಗೂ ರಾಜ್ಯದ ಅಭಿವೃದ್ಧಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ:ಬೆಂಗಳೂರು ತಲುಪಿದ 120 ಟನ್ ಆಮ್ಲಜನಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.