ಹೊಸದುರ್ಗ: ‘ಇಲ್ಲಿಯ ಸಾಣೇಹಳ್ಳಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ ಮೊದಲ ವಾರದೊಳಗೆ ಆರು ದಿನ ರಾಷ್ಟ್ರೀಯ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
‘ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಮುಖಂಡರನ್ನು ನಾಟಕೋತ್ಸವಕ್ಕೆ ಆಹ್ವಾನಿಸಲಾಗುತ್ತಿದೆ. ನಾಟಕಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ, ರೈತರ ಸಮಾವೇಶ, ಆರೋಗ್ಯ ಶಿಬಿರ, ಶಿವಕುಮಾರಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.