ADVERTISEMENT

ಮಗು ದತ್ತು ಪಡೆದರೆ 6 ತಿಂಗಳು‌‌ ರಜೆ: ಕೆಎಸ್ಆರ್‌ಟಿಸಿ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 17:30 IST
Last Updated 18 ನವೆಂಬರ್ 2021, 17:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಮಗುವನ್ನು ದತ್ತು ಪಡೆಯುವಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ರಜೆ ನೀಡಲು ಕೆಎಸ್ಆರ್‌ಟಿಸಿ ಸುತ್ತೋಲೆ ಹೊರಡಿಸಿದೆ.

ಮಗುವನ್ನು ದತ್ತು ಪಡೆದ ದಿನಾಂಕದಿಂದ ಒಂದು ವರ್ಷದ ಅವಧಿಗೆ ಅಥವಾ ಆ ಮಗುವಿಗೆ ಒಂದು ವರ್ಷ ಪೂರ್ಣಗೊಳ್ಳುವ ತನಕ ಇವುಗಳಲ್ಲಿ ಯಾವುದು ಮೊದಲು ಅಲ್ಲಿ ತನಕ 180 ದಿನಗಳ ಈ ರಜೆಗಳನ್ನು ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಪ್ರಕಾರ ಅವಕಾಶ ಕಲ್ಪಿಸಲಾಗಿದೆ.

ಮಗುವನ್ನು ದತ್ತು ಪಡೆದ ಸಂದರ್ಭದಲ್ಲಿ ಉದ್ಯೋಗಿ ಮಹಿಳೆ ಎರಡು ಜೀವಂತ ಮಕ್ಕಳನ್ನು ಹೊಂದಿರಬಾರದು ಎಂಬ ಷರತ್ತು ಆಧರಿಸಿ ರಜೆ ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.