ADVERTISEMENT

60ಕ್ಕೂ ಹೆಚ್ಚು ಕುರಿಗಳ ಸಾವು

ಬಳ್ಳಾರಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:30 IST
Last Updated 5 ಮಾರ್ಚ್ 2014, 19:30 IST

ಬಳ್ಳಾರಿ:  ತಾಲ್ಲೂಕಿನ ಕಪಗಲ್ಲು ಗ್ರಾಮದ ಬಳಿ ಬುಧವಾರ ಸಂಜೆ ಸುರಿದ ಆಲಿಕಲ್ಲು ಮಳೆಯಿಂದ 60ಕ್ಕೂ ಅಧಿಕ ಕುರಿಗಳು ಸಾವಿಗೀಡಾಗಿವೆ.
ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಭಾರಿ ಗಾಳಿ ಸಹಿತ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ನಗರದ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿದವು.

ಇದಲ್ಲದೆ ತಾಲ್ಲೂಕಿನ  ಸಿರಿವಾರ, ಕೊರ್ಲಗುಂದಿ, ಜಾಲಿಬೆಂಚಿ, ಮೋಕಾ, ಡಿ.ನಾಗೇನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಸಂಜೆ ಭಾರಿ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆಯಿಂದ ತುಂಬ ಹಾನಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.