ADVERTISEMENT

7 ಮಂದಿಗೆ ಗೌರವ ಡಾಕ್ಟರೇಟ್‌

ರಾಣಿ ಚನ್ನಮ್ಮ ವಿ.ವಿ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 19:30 IST
Last Updated 7 ಮಾರ್ಚ್ 2014, 19:30 IST

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾ­ಲಯವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಏಳು ಮಂದಿಗೆ  ಗೌರವ ಡಾಕ್ಟರೇಟ್ ನೀಡಲಿದೆ.

ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಡಾ. ಡಿ.ಪಿ.ಅಗರವಾಲ್, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ, ಸಾಮಾಜಿಕ ಕಾರ್ಯಕರ್ತೆ ತೇಜಸ್ವಿನಿ ಅನಂತಕುಮಾರ್‌, ಸ್ವಾತಂತ್ರ್ಯ ಹೋರಾಟಗಾರ ಮಹಾದೇವಪ್ಪ ಪಟ್ಟಣ, ವಿಶ್ರಾಂತ ಕುಲಪತಿ ಪ್ರೊ. ವಿ.ಟಿ.ಪಾಟೀಲ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ.­
ಜಾಮ­ದಾರ ಅವರನ್ನು ಆಯ್ಕೆ ಮಾಡಲಾಗಿದೆ.

‘ಹದಿನಾಲ್ಕು ಮಂದಿಗೆ ಗೌರವ ಡಾಕ್ಟರೇಟ್‌ ನೀಡಲು ವಿಶ್ವವಿದ್ಯಾಲಯ ಉದ್ದೇಶಿಸಿತ್ತಾದರೂ ರಾಜ್ಯಪಾಲರು ಏಳು ಮಂದಿಗೆ ಮಾತ್ರ ಅನುಮೋದನೆ ನೀಡಿದ್ದಾರೆ. ಶನಿವಾರ (ಮಾ. 8) ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾ­ಗುವುದು’ ಎಂದು ಕುಲಪತಿ ಪ್ರೊ. ಬಿ.ಆರ್‌.ಅನಂತನ್‌ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.