ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಟ್ರಸ್ಟ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಈ ವಿಷಯ ತಿಳಿಸಿದರು. ‘ಮುಂದಿನ ದಿನಗಳಲ್ಲಿ ಎನ್‌ಇಪಿ ಆಧಾರದ ಮೇಲೆ ತರಗತಿ ಆರಂಭಿಸಲಾಗುತ್ತದೆ. ಪ್ರಾರಂಭಿಕ ಹಂತದಲ್ಲಿ 500ರಿಂದ 600 ಶಾಲೆಗಳಲ್ಲಿ ಎನ್‌ಇಪಿ ಜಾರಿ ಮಾಡಲಾಗುತ್ತದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.