ADVERTISEMENT

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಸಮ್ಮತಿ: 2 ದಿನದಲ್ಲಿ ಆದೇಶ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 19:42 IST
Last Updated 6 ನವೆಂಬರ್ 2022, 19:42 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ವೇತನ ಆಯೋಗ ರಚನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದು, ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ.

ಪ್ರಸಕ್ತ ವರ್ಷದ ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದರು.

‘ಎರಡು ದಿನಗಳಲ್ಲಿ (ನ.8) ವೇತನ ಆಯೋಗ ರಚಿಸಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್‌ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡ ಲಾ ಗುವುದು’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ADVERTISEMENT

ಐದು ವರ್ಷ ಪೂರ್ಣಕ್ಕೂ ಮೊದಲೇ ಆಯೋಗ: ಐದು ವರ್ಷಗಳಿಗೆ ಒಮ್ಮೆ ವೇತನ ಆಯೋಗ ರಚನೆ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿ 4 ವರ್ಷ 7 ತಿಂಗಳಿಗೆ ರಚನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಚುನಾವಣೆ ನೀತಿ ಸಂಹಿತೆ ಘೋಷಣೆಗೂ ಮೊದಲೇ ನೌಕರರಿಗೆ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವಾಗಲಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ರಾಜ್ಯ ಎಲ್ಲ ನೌಕರರ ಪರವಾಗಿ ನ.10 ರಂದು ರೇಸ್‌ಕೋರ್ಸ್‌ ರಸ್ತೆಯ ಅವರ ನಿವಾಸದಲ್ಲಿ ಸನ್ಮಾನಿಸಲಾಗುವುದು ಎಂದು ಷಡಾಕ್ಷರಿ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.