ADVERTISEMENT

ಮಾರ್ಚ್‌ 2ನೇ ವಾರ ಮೌಲ್ಯಾಂಕನ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 15:39 IST
Last Updated 29 ಜನವರಿ 2020, 15:39 IST

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ 7ನೇ ತರಗತಿಗೆ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ಮಾರ್ಚ್‌ 2ನೇ ವಾರ ನಡೆಯಲಿದೆ.

ಸ್ಟೂಡೆಂಟ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್ ಸಿಸ್ಟಂನಲ್ಲಿ (ಸ್ಯಾಟ್ಸ್‌) ನಮೂದಿಸಲಾಗಿರುವ ವಿದ್ಯಾರ್ಥಿಗಳ ಮಾಹಿತಿಗೆ ಅನುಗುಣವಾಗಿ ಮೌಲ್ಯಾಂಕನ ನಡೆಯುವ ಕಾರಣ, ಫೆ.5ರೊಳಗೆ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು (ವಿದ್ಯಾರ್ಥಿಗಳ ಸಂಖ್ಯೆ, ಶಾಲೆಯ ಮಾಧ್ಯಮ, ಭಾಷಾ ಸಂಯೋಜನೆ) ಸ್ಯಾಟ್ಸ್‌ನಲ್ಲಿ ಹಾಕಿರಬೇಕು. ನಂತರ ನೀಡಿದ ಮಾಹಿತಿಯನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ನ (ಕೆಎಸ್‌ಕ್ಯುಎಎಸಿ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT