ADVERTISEMENT

ಎಸ್.ಎಂ. ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2025, 15:49 IST
Last Updated 30 ಏಪ್ರಿಲ್ 2025, 15:49 IST
ಎಸ್.ಎಂ. ಕೃಷ್ಣ
ಎಸ್.ಎಂ. ಕೃಷ್ಣ   

ಬೆಂಗಳೂರು: ಮಾಜಿ‌ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿನಲ್ಲಿ ವಿವಿಧ ಪ್ರಶಸ್ತಿ ನೀಡಲು ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಎಂಟು ದತ್ತಿ ನಿಧಿ ಸ್ಥಾಪಿಸಿದ್ದಾರೆ.

ಎಸ್.ಎಂ. ಕೃಷ್ಣ ಅವರ 93ನೇ ಜನ್ಮದ ದಿನ ಸ್ಮರಣಾರ್ಥ ದತ್ತಿ ನಿಧಿ ಸ್ಥಾಪಿಸಲಾಗಿದ್ದು, ಪ್ರತಿ ವರ್ಷ ವಿವಿಧ ‌ಕ್ಷೇತ್ರದ‌ ಸಾಹಿತಿಗಳು, ಗಣ್ಯರು, ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ದಿನೇಶ್‌ ಗೂಳಿಗೌಡ ತಿಳಿಸಿದ್ದಾರೆ.

‘ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ’ ಸ್ಥಾಪಿಸಿ, ವಿಶ್ವವಿದ್ಯಾಲಯಗಳು ಮತ್ತು ಪ್ರತಿಷ್ಠಿತ ಸಂಸ್ಥೆಗಳು ಪ್ರತಿ ವರ್ಷ ತಲಾ‌ ಒಬ್ಬರಿಗೆ ಪ್ರಶಸ್ತಿ ಅಥವಾ ಉತ್ತಮ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡುತ್ತವೆ. ಸಂಬಂಧಪಟ್ಟ ಸಂಸ್ಥೆಗಳಿಗೆ ಡಿಡಿ ಮೂಲಕ ಹಣವನ್ನು ಕಳುಹಿಸಿಕೊಡಲಾಗಿದೆ ಎಂದರು.

ADVERTISEMENT

ದತ್ತಿ ನಿಧಿ ವಿವರ:

*ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರಿಂದ ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯಕ್ಕೆ ₹5 ಲಕ್ಷ ದತ್ತಿ ನಿಧಿ– ಪ್ರಗತಿಪರ ರೈತರೊಬ್ಬರಿಗೆ ಪ್ರಶಸ್ತಿ

*ಮಂಡ್ಯ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಅವರಿಂದ ಮಂಡ್ಯದ ಕರ್ನಾಟಕ ಸಂಘಕ್ಕೆ ₹5 ಲಕ್ಷ ದತ್ತಿ ನಿಧಿ– ಸಮಾಜ ಸೇವೆಗಾಗಿ ಪ್ರಶಸ್ತಿ

*ಮದ್ದೂರು ಶಾಸಕ ಕೆ.ಎಂ.ಉದಯ್ ಅವರಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ₹10 ಲಕ್ಷ ದತ್ತಿ ನಿಧಿ– ಚಿನ್ನದ ಪದಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

*ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರಿಂದ ಕಾನೂನು ವಿಶ್ವವಿದ್ಯಾಲಯಕ್ಕೆ ₹5 ಲಕ್ಷ ದತ್ತಿ– ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗೆ ಚಿನ್ನದ ಪದಕ

*ಶ್ರೀರಂಗಪಟ್ಟಣ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಅವರಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ಗೆ ₹5 ಲಕ್ಷ ದತ್ತಿ– ಒಬ್ಬರು ಚಿತ್ರಕಲಾವಿದರಿಗೆ ನಗದು– ಪ್ರಶಸ್ತಿ

*ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರಿಂದ ಮಂಡ್ಯ ವಿಶ್ವವಿದ್ಯಾಲಯಕ್ಕೆ ₹5 ಲಕ್ಷ ದತ್ತಿ– ಚಿನ್ನದ ಪದಕ ಪಡೆದ ವಿದ್ಯಾರ್ಥಿಗೆ ಚಿನ್ನದ ಪದಕ

* ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಅವರಿಂದ ಕನ್ನಡ ಸಾಹಿತ್ಯ ಪರಿಷತ್‌ಗೆ ₹5 ಲಕ್ಷ ದತ್ತಿ– ಒಬ್ಬ ಸಾಹಿತಿಗೆ ನಗದು, ಪ್ರಶಸ್ತಿ

* ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಅವರಿಂದ ಮೈಸೂರಿನ ರಾಮಕೃಷ್ಣ ಆಶ್ರಮಕ್ಕೆ ₹5 ಲಕ್ಷ ದತ್ತಿ– ಪ್ರಥಮ ಸ್ಥಾನ ಪಡೆದವರಿಗೆ ಚಿನ್ನದ ಪದಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.