ADVERTISEMENT

824 ತಜ್ಞ ವೈದ್ಯರ ನೇಮಕಾತಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 18:31 IST
Last Updated 10 ಸೆಪ್ಟೆಂಬರ್ 2020, 18:31 IST
   

ಬೆಂಗಳೂರು: ರಾಜ್ಯ ಸರ್ಕಾರದ ವಿಶೇಷ ನೇಮಕಾತಿ ಸಮಿತಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 824 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿದೆ.

ಮಂಜೂರಾಗಿದ್ದ 2,832 ತಜ್ಞವೈದ್ಯರ ಹುದ್ದೆಗಳಲ್ಲಿ ಸದ್ಯ 2,008 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.
50 ವರ್ಷ ಮೇಲ್ಪಟ್ಟ ಕೆಲ ಹಿರಿಯ ವೈದ್ಯರಿಗೆ ಕೋವಿಡ್‌ ಕೆಲಸದಿಂದ ವಿನಾಯಿತಿ ನೀಡಿದೆ. ಇದರಿಂದ ತಜ್ಞ ವೈದ್ಯರ ಸಮಸ್ಯೆ ಇನ್ನಷ್ಟು ಹೆಚ್ಚಿದೆ. ‌

ಖಾಲಿ ಇರುವ 1,246 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಹಾಗೂ 88 ದಂತ ವೈದ್ಯಾಧಿಕಾರಿಗಳ ಹುದ್ದೆ ಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. karunadu.karnataka.gov.in ನಲ್ಲಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಇಲಾಖೆಯ ಮುಖ್ಯ ಆಡಳಿತಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.