ADVERTISEMENT

9 ಮಂದಿಗೆ ಮುರುಘಾ ಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2012, 19:30 IST
Last Updated 13 ಅಕ್ಟೋಬರ್ 2012, 19:30 IST

ಚಿತ್ರದುರ್ಗ: ಇಲ್ಲಿನ ಮುರುಘರಾಜೇಂದ್ರ ಮಠದ ವತಿಯಿಂದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ನೀಡುವ 2012ನೇ ಸಾಲಿನ `ಮುರುಘಾ ಶ್ರೀ~ ಪ್ರಶಸ್ತಿಗೆ 9 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಇಳಕಲ್‌ನ ವಿಜಯ ಮಹಾಂತೇಶ್ವರ ಮಠದ ಡಾ.ಮಹಾಂತ ಅಪ್ಪಗಳು, ಪ್ಯಾರಾ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಕ್ರೀಡಾಪಟು ಎಚ್.ಎನ್. ಗಿರೀಶ್, ಸಂಸ್ಕೃತಿ ಚಿಂತಕ ಡಾ.ಬೈರಮಂಗಲ ರಾಮೇಗೌಡ, ಕೃಷಿ ವಿಜ್ಞಾನಿ ಪ್ರೊ.ಎಂ. ರುದ್ರಾರಾಧ್ಯ, ಚಾಮರಾಜನಗರದ ದೀನಬಂಧು ಅನಾಥ ಸೇವಾಶ್ರಮದ ಜಿ.ಎಸ್. ಜಯದೇವ, ಪ್ರಗತಿಪರ ರೈತರಾದ ಮೊಳಕಾಲ್ಮುರಿನ ತಿಪ್ಪೇಸ್ವಾಮಿ, ಹಿರಿಯೂರು ತಾಲ್ಲೂಕು ಮುಂಗಸವಳ್ಳಿಯ ಲತಾ ರವೀಂದ್ರಪ್ಪ, ಸಿಂಧನೂರಿನ ವೀರಭದ್ರಗೌಡ ಕುರಕುಂದಿ, ಮೊಂಗಸುಳಿಯ ಮುಂಗಲಿ ಕೊರಗ ಅವರಿಗೆ ಶರಣ ಸಂಸ್ಕೃತಿ ಉತ್ಸವದ ಆರಂಭದ ದಿನವಾದ ಏ. 21ರಂದು ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅ.21ರಿಂದ  ಆರಂಭವಾಗಲಿದೆ. ಇದಕ್ಕೂ ಮೊದಲು ಅ. 18ರಿಂದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಕ್ರೀಡಾಕೂಟ `ಜಮುರಾ ಕಪ್~ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.