ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಗಜಬರವಾಡಿ ಕ್ರಾಸ್ ಸಮೀಪ ಅಧಿಕೃತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 9 ಕೆ.ಜಿ. ಚಿನ್ನಾಭರಣ ಹಾಗೂ ₹ 17 ಲಕ್ಷ ನಗದನ್ನು ಸಿಇಎನ್ (ಸೈಬರ್ ಕ್ರೈಂ ಮತ್ತು ಆರ್ಥಿಕ, ಮಾದಕ ವಸ್ತು ಅಪರಾಧ ತಡೆ) ಠಾಣೆ ಪೊಲೀಸರು ಭಾನುವಾರ ಸಂಜೆ ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಹರ್ಷ ಪೋರವಾಲ ಹಾಗೂ ರಂಜಿತ್ ಸಿಂಗ್ ಬಂಧಿತರು. ‘ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ. ಮುಂದಿನ ವಿಚಾರಣೆಗಾಗಿ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.