ನವದೆಹಲಿ: ‘ಬೀದರ್ ಜಿಲ್ಲೆಯಲ್ಲಿ ಸೋಯಾಬಿನ್ ಬೆಳೆದ ಶೇ 90ರಷ್ಟು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಲಾಭ ಸಿಕ್ಕಿಲ್ಲ. ಈ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕು’ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಆಗ್ರಹಿಸಿದರು.
ಲೋಕಸಭೆಯಲ್ಲಿ ಬುಧವಾರ ಗಮನ ಸೆಳೆದ ಅವರು, ‘ಜಿಲ್ಲೆಯಲ್ಲಿ ಸೋಯಾಬಿನ್ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. 2.20 ಲಕ್ಷ ಹೆಕ್ಟೇರ್‌ನಲ್ಲಿ ಈ ಬೆಳೆ ಬೆಳೆಯಲಾಗಿದೆ. 20 ಲಕ್ಷ ಕ್ವಿಂಟಲ್ ಸೋಯಾ ಬೆಳೆಯಲಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಮುಗಿದು ಹೋಯಿತು. ಇದರಿಂದಾಗಿ, ರೈತರಿಗೆ ಹೆಚ್ಚಿನ ಲಾಭ ಆಗಿಲ್ಲ. ಅವರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.