ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 54 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ನಗರ ಹಾಗೂ ತಾಲ್ಲೂಕಿನ ವಿವಿಧ ಹಳ್ಳಿಗಳು, ಹುಕ್ಕೇರಿ, ಗೋಕಾಕ, ಬೈಲಹೊಂಗಲ, ರಾಮದುರ್ಗ, ಚಿಕ್ಕೋಡಿ ತಾಲ್ಲೂಕುಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಇಲ್ಲಿನ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ 8 ಮಂದಿಗೆ ಸೋಂಕು ತಗುಲಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸೋಂಕಿನ ಕಾರಣದಿಂದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಇಬ್ಬರು ಹಾಗೂ ಸವದತ್ತಿ ತಾಲ್ಲೂಕಿನ ಒಬ್ಬರು ಮೃತರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.
90 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.