ADVERTISEMENT

ಸಿಎಸ್‌ಆರ್‌ ನಿಧಿಯಿಂದ 900 ಪಿಎಚ್‌ಸಿ ಅಭಿವೃದ್ಧಿ: ಡಾ.ಕೆ.ಸುಧಾಕರ್‌

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 17:50 IST
Last Updated 17 ಮಾರ್ಚ್ 2021, 17:50 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿ ಬಳಸಿಕೊಂಡು ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸಿಎಸ್‌ಆರ್‌ ನಿಧಿ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ಸಿಎಸ್‌ಆರ್‌ ಸಮಿತಿಯ ಅಧ್ಯಕ್ಷೆ ಗೀತಾಂಜಲಿ ಕಿರ್ಲೋಸ್ಕರ್‌ ಜತೆ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಒಟ್ಟು 2,500 ಪಿಎಚ್‌ಸಿಗಳಿವೆ. ಮೊದಲ ಹಂತದಲ್ಲಿ ಸಿಎಸ್‌ಆರ್‌ ನಿಧಿ ಬಳಸಿ 900 ಪಿಎಚ್‌ಸಿಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.

2014–15ರ ಸಂದರ್ಭದಲ್ಲಿ ರಾಜ್ಯದಲ್ಲಿನ ಕಾರ್ಪೋರೇಟ್‌ ಕಂಪನಿಗಳು ಸುಮಾರು ₹ 5,000 ಕೋಟಿಯಷ್ಟು ಮೊತ್ತವನ್ನು ಸಿಎಸ್‌ಆರ್‌ ನಿಧಿಯಡಿ ವೆಚ್ಚ ಮಾಡುತ್ತಿದ್ದವು. ಈಗ ಆ ಮೊತ್ತ ದುಪ್ಪಟ್ಟಾಗಿದೆ. ಸಿಎಸ್‌ಆರ್‌ ನಿಧಿಯ ಶೇಕಡ 25ರಷ್ಟನ್ನು ಆರೋಗ್ಯ ಕ್ಷೇತ್ರಕ್ಕೆ ಬಳಸಲು ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಈ ಅವಕಾಶ ಬಳಸಿಕೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.