ADVERTISEMENT

ಫೆ. 1ರಿಂದ 9, 11ನೇ ತರಗತಿ ಆರಂಭ: ಸುರೇಶ್‌ಕುಮಾರ್

‘ಜೂನ್‌14ರಿಂದ 25ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ’

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 18:44 IST
Last Updated 28 ಜನವರಿ 2021, 18:44 IST
ಎಸ್‌. ಸುರೇಶ್‌ಕುಮಾರ್
ಎಸ್‌. ಸುರೇಶ್‌ಕುಮಾರ್   

ಬೆಂಗಳೂರು: ‘ಫೆ. 1ರಿಂದ ಪ್ರಸಕ್ತ (2020–21) ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿ ಆರಂಭಿಸಲಾಗು ವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, 'ಜೂನ್‌ 14ರಿಂದ 25ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಗಳು ನಡೆಯಲಿವೆ.ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿ ಶೀಘ್ರ ಪ್ರಕಟಿ ಸಲಾಗುವುದು’ ಎಂದರು.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳ ಜತೆ ಸಭೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ ಅವರು, ‘ಒಂದರಿಂದ ಎಂಟರವರೆಗಿನ ತರಗತಿಗಳನ್ನು ಆರಂಭಿ ಸುವ ಕುರಿತಂತೆ ಫೆಬ್ರುವರಿ ಎರಡನೇ ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ತೀರ್ಮಾನಿಸಲಾಗುವುದು’ ಎಂದರು.

ADVERTISEMENT

‘ಫೆ. 1ರಿಂದ 9ರಿಂದ ದ್ವಿತೀಯ ಪಿಯುಸಿವರೆಗಿನ ತರಗತಿಗಳು ಪೂರ್ಣ ಅವಧಿ ನಡೆಯಲಿವೆ. 6ರಿಂದ 8ನೇ ತರಗತಿವರೆಗೆ ಈಗ ನಡೆಯುತ್ತಿರುವಂತೆ ‘ವಿದ್ಯಾಗಮ’ ಮುಂದುವರಿಯಲಿದೆ’ ಎಂದು ಸಚಿವರು ಸ್ಪಷ್ಟಪಡಿಸಿದರು.

‘ಈಗಾಗಲೇ ಆರಂಭವಾಗಿರುವ 12ನೇ ತರಗತಿಗೆ ಸರಾಸರಿ ಶೇ 75, 10ನೇ ತರಗತಿಗೆ ಶೇ 70, 6ರಿಂದ 9ನೇ ತರಗತಿಯ ವಿದ್ಯಾಗಮ ತರಗತಿಗೆ ಶೇ 45ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ’ ಎಂದರು.

‘ಈ ಅಂಶವನ್ನು ತಾಂತ್ರಿಕ ಸಲಹಾ ಸಮಿತಿ ಅವಲೋಕಿಸಿ, 9 ಮತ್ತು 11ನೇ ತರಗತಿ ಆರಂಭಿಸಲು ಅನುಮತಿ ನೀಡಿದೆ’ ಎಂದು ಅವರು ವಿವರಿಸಿದರು.

‘ಎಲ್ಲ ತರಗತಿಗಳು ನಿರಂತರವಾಗಿ ನಡೆಸುವಂತೆಶಿಕ್ಷಕ- ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಒತ್ತಾಯಿಸಿದ್ದಾರೆ.ಮಕ್ಕಳ ಹಿತದೃಷ್ಟಿಯಿಂದ ಎಲ್ಲ ತರಗತಿಗಳನ್ನೂ ಆರಂಭಿಸುವಂತೆ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ಸಂಘಟನೆಗಳು, ಪದವಿಪೂರ್ವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳು ಕೂಡಾ ಆಗ್ರಹಿಸಿವೆ’ ಎಂದು ಸುರೇಶ್ ಕುಮಾರ್ ತಿಳಿಸಿದರು.

ಆಕ್ಷೇಪಣೆಗೆ ಅವಕಾಶ: ‘ಎಸ್ಸೆಸ್ಸೆಲ್ಸಿ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಫೆ. 26ರವರೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದೂ ಅವರು ಹೇಳಿದರು.

***

ಖಾಸಗಿ ಶಾಲಾ ಶುಲ್ಕ ನಿಗದಿ ಕುರಿತು ಹಲವು ಸುತ್ತಿನ ಚರ್ಚೆ ನಡೆದಿದೆ. ಮುಖ್ಯಮಂತ್ರಿಯವರ ಅಭಿಪ್ರಾಯ ಪಡೆದು ಅಂತಿಮವಾಗಿ ನಿರ್ಧರಿಸಲಾಗುವುದು

- ಎಸ್‌. ಸುರೇಶ್‌ಕುಮಾರ್ಪ್ರಾ, ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.