ADVERTISEMENT

ದ್ವಿತೀಯ ಪಿಯು: ಫಲಿತಾಂಶಕ್ಕೆ ಮಾರ್ಗದರ್ಶಿ ಸೂತ್ರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 20:36 IST
Last Updated 5 ಜುಲೈ 2021, 20:36 IST

ಬೆಂಗಳೂರು: ‘ಪ್ರಥಮ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಅಂಕಗಳು ಹಾಗೂ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಯ ಸಾಧನೆಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದಲ್ಲಿ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟು ಫಲಿತಾಂಶ ಪ್ರಕಟಿಸಲು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು’ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.