ADVERTISEMENT

ಬೆಂಜ್ ಕಾರು ಡಿಕ್ಕಿ: ಮಹಿಳಾ‌ ಟೆಕಿ ಸಾವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2024, 21:33 IST
Last Updated 3 ನವೆಂಬರ್ 2024, 21:33 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಬೆಂಜ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್‌ ಸಂಧ್ಯಾ (30) ಮೃತಪಟ್ಟಿದ್ದಾರೆ.

ADVERTISEMENT

ಸಂಧ್ಯಾ ಅವರು ಬಸವೇಶ್ವರನಗರ ನಿವಾಸಿ. ಘಟನೆ ಸಂಬಂಧ ಬೆಂಜ್‌ ಕಾರು ಚಾಲಕ, ನಾಗರಬಾವಿ ನಿವಾಸಿ ಧನುಷ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು-ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಸಂಧ್ಯಾ ಅವರು ಶನಿವಾರ ರಾತ್ರಿ ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಕೆಂಗೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಜ್‌ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

‘ಧನುಷ್‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ಮದ್ಯ ಸೇವಿಸಿರುವುದು ಖಚಿತಪಟ್ಟಿದೆ. ಮದ್ಯದ ಅಮಲಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರನ್ನು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.