ADVERTISEMENT

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಎ.ಟಿ. ರಾಮಸ್ವಾಮಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2025, 11:38 IST
Last Updated 19 ಏಪ್ರಿಲ್ 2025, 11:38 IST
<div class="paragraphs"><p>ಎ.ಟಿ. ರಾಮಸ್ವಾಮಿ</p></div>

ಎ.ಟಿ. ರಾಮಸ್ವಾಮಿ

   

ಬೆಂಗಳೂರು: ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಅವರು, ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವದ ಕೆಲಸ. ಜಾಗತಿಕ ತಾಪಮಾನ ಏರಿಕೆಯಾಗಿದೆ. ಹವಾಮಾನದ ಅಸಮತೋಲನ ಉಂಟಾಗಿದೆ. ನೀರು, ಗಾಳಿ ಆಹಾರವೂ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯ ನಾಶದಿಂದ ನದಿ, ತೊರೆಗಳು ಬತ್ತಿವೆ. ಅಂತರ್ಜಲ ಕುಸಿದಿದೆ. ಈ ಕುರಿತು ಜನಜಾಗೃತಿ ಮೂಡಿಸಬೇಕಿದೆ. ಪರಿಸರ ಉಳಿದರೆ ಜೀವ ಸಂಕುಲ ಉಳಿಯುತ್ತದೆ. ಹಾಗಾಗಿ, ಕೃಷಿ ಕಾರ್ಯದ ಜತೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದು ರಾಜೀನಾಮೆಗೆ ಕಾರಣಗಳನ್ನು ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.