ADVERTISEMENT

ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನಲ್ಲಿ ಸೋಂಕು ನಿವಾರಕ ಸಿಂಪಡನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 14:56 IST
Last Updated 11 ಏಪ್ರಿಲ್ 2021, 14:56 IST
ಪಕ್ಷದ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ಬಸ್‌ ನಿಲ್ದಾಣದಲ್ಲಿ ಸೋಂಕು ನಿವಾರಕ ಸಿಂಪಡಿಸಿದರು
ಪಕ್ಷದ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ಬಸ್‌ ನಿಲ್ದಾಣದಲ್ಲಿ ಸೋಂಕು ನಿವಾರಕ ಸಿಂಪಡಿಸಿದರು   

ಬೆಂಗಳೂರು: ಆಮ್‌ ಆದ್ಮಿ ಪಕ್ಷವು ‘ಸುರಕ್ಷಿತ ಯುಗಾದಿ- ಸಂತಸ ಯುಗಾದಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಎಲ್ಲಾ ವಾರ್ಡ್‌ಗಳಲ್ಲಿನ ಮಾರುಕಟ್ಟೆ, ಧಾರ್ಮಿಕ ಕ್ಷೇತ್ರ, ಬಸ್ ನಿಲ್ದಾಣ ಸೇರಿದಂತೆ ಜನ ಸಂದಣಿಯ ಇತರ ಸ್ಥಳಗಳಲ್ಲಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ನಗರದ ಎನ್.ಆರ್.ರಸ್ತೆಯಲ್ಲಿನ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಮುಂಭಾಗದ ಬಸ್ ನಿಲ್ದಾಣದಲ್ಲಿ ಪಕ್ಷದ ಕಾರ್ಯಕರ್ತರು ಸೋಂಕು ನಿವಾರಕ ಸಿಂಪಡಿಸಿದರು.

ಪಕ್ಷದ ಚುನಾವಣಾ ಉಸ್ತುವಾರಿ ಶಾಂತಲಾ ದಾಮ್ಲೆ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಬೆಂಗಳೂರು ನಗರದ ಉಪಾಧ್ಯಕ್ಷ ಸುರೇಶ್ ರಾಥೋಡ್ ಅವರು ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಿದರು. ಜೊತೆಗೆ ಕೋವಿಡ್‌ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.