ADVERTISEMENT

ರಾಜ್ಯ ಹೈಕೋರ್ಟ್‌ಗೆ ಓಕಾ ನೂತನ ಸಿ.ಜೆ?

ಸುಪ್ರೀಂ ಕೋರ್ಟ್‌ ಕೊಲೀಜಿಯಂ ಶಿಫಾರಸು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 19:46 IST
Last Updated 10 ಏಪ್ರಿಲ್ 2019, 19:46 IST
   

ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಯಾಗಿ ಅಭಯ್‌ ಶ್ರೀನಿವಾಸ್‌ ಓಕಾ ಅವರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ. ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರಲ್ಲಿ ನೇಮಕಗೊಂಡಿದ್ದ ಓಕಾ, 2005ರಿಂದ ಕಾಯಂ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದಿನೇಶ್‌ ಮಾಹೇಶ್ವರಿ ಅವರು ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ನಂತರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆ ತೆರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT