ADVERTISEMENT

ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:16 IST
Last Updated 7 ಆಗಸ್ಟ್ 2020, 16:16 IST
ಅಭಿನವ ಶಿವಪುತ್ರ ಸ್ವಾಮೀಜಿ
ಅಭಿನವ ಶಿವಪುತ್ರ ಸ್ವಾಮೀಜಿ   

ಬೆಳಗಾವಿ: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾದರು.

‘ಅನಾರೋಗ್ಯದಿಂದಾಗಿ ಅವರು ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಲ್ಲಿನ ಕೆಎಲ್‌ಇ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಲಿಂಗೈಕ್ಯರಾದರು’ ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.

ಶ್ರೀಗಳ ಸಮಾಧಿಕ್ರಿಯೆ ಶನಿವಾರ (ಆ.8) ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಸಂತಾಪ: ಶ್ರೀಗಳ ನಿಧನಕ್ಕೆ ಇಂಚಲದ ಸಾಧು ಸಂಸ್ಥಾನಮಠದಶಿವಾನಂದ ಭಾರತಿ ಸ್ವಾಮೀಜಿ, ಬೀದರ್‌ನ ಶಿವಕುಮಾರ ಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.