ADVERTISEMENT

ಮಾಸ್ಕ್‌ ರದ್ದು ಸಮಾಲೋಚನೆ: ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 12:23 IST
Last Updated 4 ಏಪ್ರಿಲ್ 2022, 12:23 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಬೆಂಗಳೂರು: ‘ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ ಧರಿಸುವುದನ್ನು ರದ್ದು ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ಕೆಲವು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ ಧರಿಸುವುದನ್ನು ರದ್ದು ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಆದೇಶ ಮಾಡಿಲ್ಲ. ಈಗಾಗಲೇ ಶೇ 90 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ’ ಎಂದರು.

‘ಕೆಲವು ದೇಶಗಳಲ್ಲಿ ಕೋವಿಡ್‌ 4ನೇ ಅಲೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಚೀನಾ ಮತ್ತು ಕೆಲವು ದೇಶಗಳಲ್ಲಿ ಓಮೈಕ್ರಾನ್‌ನ ರೂಪಾಂತರ ತಳಿಗಳು ಕಂಡು ಬಂದಿವೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆ ಸೂಚನೆಗಳನ್ನು ಪರಿಗಣಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ಹಲಾಲ್‌ ಕುರಿತು ಆರೋಗ್ಯ ಇಲಾಖೆಯಿಂದ ಯಾವುದೇ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ. ಇಲಾಖೆಯಿಂದ ಆ ರೀತಿಯ ಯಾವುದೇ ಪ್ರಮಾಣ ಪತ್ರ ನೀಡಲು ಅವಕಾಶವಿಲ್ಲ. ಆಹಾರ ಸುರಕ್ಷಣೆತಯ ಬಗ್ಗೆ ಪ್ರಮಾಣಪತ್ರ ನೀಡಲಾಗುತ್ತದೆ. ಆದರೆ, ಗುಣಮಟ್ಟದ ಬಗ್ಗೆ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಸುಧಾಕರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.