
ಪ್ರಜಾವಾಣಿ ವಾರ್ತೆ
ಜಿ. ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎಂದು ಆರೋಪಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.
ಸದಾಶಿವನಗರದಲ್ಲಿರುವ ಪರಮೇಶ್ವರ ಅವರ ಮನೆಯ ಮುಂದೆ ಬುಧವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡ್ರಗ್ಸ್ ಮಾಫಿಯಾ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು. ಈ ವೇಳೆ ಸಚಿವರು ತಮ್ಮ ಮನೆಯಲ್ಲಿಯೇ ಇದ್ದರು.
ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಕಾರರು ರಸ್ತೆಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.