ADVERTISEMENT

ಹೈಕೋರ್ಟ್‌ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 20:41 IST
Last Updated 9 ಸೆಪ್ಟೆಂಬರ್ 2022, 20:41 IST
   

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್‌ ವಿಭಾಗದಿಂದ ಹಿಂಪಡೆದು ಎಸಿಬಿ ರಚಿಸಿತ್ತು. ಇದನ್ನು ರದ್ದುಗೊಳಿಸಿ ಹೈಕೋರ್ಟ್‌ ವಿಭಾಗೀಯ ಪೀಠ ಇದೇ ಆಗಸ್ಟ್‌ 11ರಂದು ತೀರ್ಪು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.